ಆ, 19: ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಮಳೆಯ ಆರ್ಭಟ ಇಲ್ಲವಾದರೂ, ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಮೈಸೂರಿನಲ್ಲಿ ಪ್ರವಾಹ ಸೃಷ್ಟಿಸಿದೆ. ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿರೋದ ನೇರ ಪರಿಣಾಮ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆ ಮೇಲಾಗಿದೆ. ಕಬಿನಿ, ಕೆಆರ್ಎಸ್ಗೆ ನೀರಿನ ಹರಿವು ಹೆಚ್ಚಾಗಿದ್ದು, ತುಂಬಿ ತುಳುಕುತ್ತಿರೋ ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ 2 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿಯಬಿಡಲಾಗುತ್ತಿದ ಹೀಗಾಗಿ ಎಲ್ಲೆಲ್ಲೂ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವರಾದ ಜಿಟಿ ದೇವೇಗೌಡ, ಆರ್ ವಿ ದೇಶಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಬಿನಿ ಅಬ್ಬರಕ್ಕೆ ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಮುಳುಗಡೆಯಾಗಿದೆ. ಮೈಸೂರಿನಿಂದ ತಮಿಳುನಾಡು, ಕೇರಳ, ಚಾಮರಾಜನಗರ ಹಾಗೂ ಗುಂಡ್ಲುಪೇಟೆಗೆ ಸಂಪರ್ಕ ಕಲ್ಪಿಸುವ ಮಾರ್ಗವೂ ಸ್ಥಗಿತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ . ಇದ್ದಕ್ಕಿದ್ದ ಪರ್ಯಾಯ ರಸ್ತೆಯೂ ಸಹ ಮುಳುಗಡೆಯಾಗುವ ಭೀತಿಯಲ್ಲಿದೆ.