ಸುಳ್ಯ, ಆ 19: ಸುಳ್ಯ ಸಮೀಪದ ಜೋಡುಪಾಲದಲ್ಲಿ ನೆರೆ ಹಾವಳಿಯಿಂದ ಸಂತ್ರಸ್ಥರಾಗಿ ಅರಂತೋಡು, ಸಂಪಾಜೆ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ನಿರಾಶ್ರಿತರನ್ನು ಸಂಸದ ಡಿವಿ ಸದಾನಂದ ಗೌಡ ಭೇಟಿ ಮಾಡಿ ಸಾಂತ್ವನ ಹೇಳಿದರು.
ನಿರಂತರ ಮಳೆಯಿಂದಾಗಿ ಗುಡ್ಡ ಕುಸಿದು ಪ್ರದೇಶದಲ್ಲಿ ನೆರೆ ಉಂಟಾಗಿದೆ. ಅನೇಕ ಜನರು ತಮ್ಮ ಮನೆ ಮಠಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಸಚಿವರು ಭೇಟಿ ನೀಡಿದರು. ಬಳಿಕ ಅಲ್ಲಿಂದ ಅವರು ಕಲ್ಮಾಕರರು ನೆರೆ ಹಾವಳಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿದರು.