ಕಾಸರಗೋಡು, ಆ : ಶಾಲಾ ಪರಿಸರದಲ್ಲಿ ಪಾನ್ ಮಸಾಲ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂದ್ಯೋಡು ಪಚ್ಚ೦ಬಳದ ಬದ್ರುದ್ದೀನ್ ಎಂದು ಗುರುತಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಭಾರೀ ಮೌಲ್ಯದ ಪಾನ್ ಮಸಾಲ ಉತ್ಪನ್ನಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.
ಬಂಧಿತ ಬದ್ರುದ್ದೀನ್
ಕೇರಳದಲ್ಲಿ ಪಾನ್ ಮಸಾಲ ಉತ್ಪನ್ನಗಳನ್ನು ನಿಷೇಧಿಸಲಾಗಿದ್ದು, ಈ ಹಿನ್ನಲೆಯಲ್ಲಿ ಹೊರರಾಜ್ಯದಿಂದ ಅಕ್ರಮವಾಗಿ ಪಾನ್ ಮಸಾಲ ಉತ್ಪನ್ನಗಳನ್ನು ತಂದು ನಾಲ್ಕು ಪಟ್ಟು ಅಧಿಕ ಬೆಳೆಗೆ ಇಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬದ್ರುದ್ದೀನ್ ನನ್ನು ಈ ಹಿಂದೆ ಪಾನ್ ಮಸಾಲ ಉತ್ಪನ್ನ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ತೆಗೆದುಕೊಂಡು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿತ್ತು .