ಬೆಳ್ತಂಗಡಿ, ಆ 21(SM): ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಎಂಬಲ್ಲಿ ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಚಾರ್ಮಾಡಿಯ ಬೀಟಿಕೆ ಮನೆ ನಿವಾಸಿ ಮಹಮ್ಮದ್ ರಫೀಕ್(33) ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. 3 ತಿಂಗಳ ಹಿಂದೆ ಆರೋಪಿ ಕೃತ್ಯ ಎಸಗಿದ್ದ. ಬಳಿಕ ಆತ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯ ಪತ್ತೆಗಾಗಿ ಪಿ.ಐ. ಡಿಸಿಐಬಿ ಸುನೀಲ್ ವೈ ನಾಯಕ್ ಅವರ ನಿರ್ದೇಶನದಂತೆ ಉದಯ ಗೌಡ, ಪ್ರವೀಣ್ ರೈ ಅವರು ಬೆಳ್ಳಾರೆಯ ಮಾಸ್ತಿಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ ಧರ್ಮಸ್ಥಳ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದು, ತನಿಖೆ ಮುಂದುವರೆದಿದೆ.