ಪುತ್ತೂರು, ಆ 22(MSP): ಮಾಜಿ ಶಾಸಕಿಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಲಾಗಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಲೋಕೇಶ್ ಕೆ.ಪಿ ಎಂಬಾತ ಅವಹೇಳನ ಮಾಡಿ ಮೆಸೇಜ್ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದು ಕೋಮು ಸೌಹಾರ್ದ ಭಾವನೆಯನ್ನು ಕೆರಳಿಸುವಂತೆ ಇದೆ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ
ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಲೋಕೇಶ್ ಕೆ.ಪಿ ಅವರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.