ಕಡಬ, ಮಾ. 15 (DaijiworldNews/SM): ಕಡಬದ ಐತೂರು ಗ್ರಾಮದ ಅರಣ್ಯ ಅಧಿಕಾರಿಗಳ ಮಧ್ಯರಾತ್ರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ಖಂಡಿಸಿ ಕಡಬದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ನೀತಿ ಸಾಮಾಜಿಕ ಸಂಘಟನೆ ಹಾಗೂ ಪ್ರಸಾದ್ ಕುಟುಂಬಸ್ಥರು ಕಡಬ ತಾಲೂಕು ತಹಶೀಲ್ದಾರರ ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದೌರ್ಜನ್ಯ ಎಸಗಿದ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿಸುವ ತನಕ ಉಪವಾಸ ಸತ್ಯಾಗ್ರಹ ಮುಂದುವರೆಸುವ ಎಚ್ಚರಿಕೆಯನ್ನು ನೀಡಲಾಗಿದೆ.
ನಿಷ್ಠಾವಂತ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ನೀತಿ ತಂಡದ ಅಧ್ಯಕ್ಷ ಜಯನ್, ಪ್ರಸಾದ್ ಕುಟುಂಬಸ್ಥರು ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಇನ್ನು ಈ ಪ್ರಕರಣ ನಡೆದು ವಾರ ಕಳೆದಿದ್ದರೂ ಅಧಿಕಾರಿಗಳು ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸಾರ್ವಜನಿಕರು ಕೂಡ ಆಗ್ರಹಿಸುತ್ತಿದ್ದಾರೆ.