ಬೆಂಗಳೂರು, ಮಾ. 15 (DaijiworldNews/SM): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಸೋಮವಾರದಂದು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದ.ಕ. ಜಿಲ್ಲಾಧಿಕಾರಿ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಹೊರರಾಜ್ಯದಿಂದ ಆಗಮಿಸುವವರಿಗೆ 72 ಗಂಟೆಯೊಳಗಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಹೊರರಾಜ್ಯದಿಂದ ಬರುವವರು ನೆಗೆಟಿವ್ ಪರೀಕ್ಷಾ ವರದಿ ನೀಡುವುದು ಕಡ್ಡಾಯ ಎಂಬುವುದಾಗಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.