ಉಡುಪಿ, ಮಾ. 16 (DaijiworldNews/SM): ಟಿಪ್ಪರ್ ಚಕ್ರದಡಿ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪತ್ತಿರುವ ಘಟನೆ ತಾಲೂಕಿನ ಕರಾವಳಿ ಬೈಪಾಸ್ ನಲ್ಲಿ ನಡೆದಿದೆ.

ಮೃತರು ಅಪರಿಚಿತ ವ್ಯಕ್ತಿಯಾಗಿದ್ದು ಮೈಮೇಲೆ ಸರಿಯಾಗಿ ಬಟ್ಟೆಗಳನ್ನು ಧರಿಸುತ್ತಿರಲಿಲ್ಲ ಎನ್ನಲಾಗಿದೆ. ಟಿಪ್ಪರ್ ಬರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿ ಟಿಪ್ಪರ್ ಮೇಲೆ ಹಾರಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಬಳಿಕ ಮ್ರುತಪಟ್ತಿದ್ದಾರೆ. ಈ ಬಗ್ಗೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.