ಉಡುಪಿ, ಮಾ.17 (DaijiworldNews/PY): ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಕೆ ಎಸ್ ಗೌತಮ್ ಗೌಡ (23) ಹಾಗೂ ಬೆಳಗಾವಿ ನಿವಾಸಿ ವಿಕ್ಕಿ ದಯಾಳ್ ಅಲಿಯಾಸ್ ವಿಕ್ಕಿ (21) ಎಂದು ಗುರುತಿಸಲಾಗಿದೆ.
ಮಾ.16ರ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಉಡುಪಿಯ ಕುಂಜಿಬೆಟ್ಟು ಕೆಇಬಿ ವಸತಿ ಗೃಹದ ಬಳಿ ಇರುವ ವಿಮಲಾ ಪದ್ಮನಾಭ ಕಟ್ಟಡದ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ದೊರೆತ ಮಾಹಿತಿಯಂತೆ ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್ ಅವರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಕೆಂಪು ಪ್ಲಾಸ್ಟಿಕ್ ತೊಟ್ಟೆಯಲ್ಲಿದ್ದ 1,050 ಗ್ರಾಂ ತೂಕದ ಸುಮಾರು 30,000 ರೂ. ಮೌಲ್ಯದ ಗಾಂಜಾ, 20,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.