ಮಂಗಳೂರು, ಮಾ. 17 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 72 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸ್ಂಖ್ಯೆ 34,935ಕ್ಕೆ ಏರಿಕೆಯಾಗಿದೆ. ಈ ಪೈಕಿ 378 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 5,99,771 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 5,64,836 ಮಂದಿಯ ವರದಿ ನೆಗೆಟಿವ್ ಆಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 33,816 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 25 ಜನರನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 741 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೋವಿಡ್ ವರದಿ:
ಬುಧವಾರ 42 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,928ಕ್ಕೆ ಏರಿಕೆಯಾಗಿದೆ. ಈ ಪೈಕಿ 114 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,88,565 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಬುಧವಾರ 13 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,624ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.