ಮಂಗಳೂರು, ಮಾ.18 (DaijiworldNews/PY): ಮಂಗಳೂರು ಟ್ರಾಫಿಕ್ ಪೊಲೀಸ್, ಆರ್ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಳವಡಿಸಿದ್ದಾರೆ.


ಇತ್ತೀಚೆಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಎಸ್ಸಿ, ಎಸ್ಟಿ ಸಮುದಾಯದ ಕುಂದುಕೊರತೆಗಳ ಸಭೆಯಲ್ಲಿ ಈ ವಿಚಾರದ ಬಗ್ಗೆ ದೂರು ಕೇಳಿ ಬಂದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಪಿ, ಇದನ್ನು ಮುಂದಿನ ಕುಂದುಕೊರತೆ ಸಭೆಯೊಳಗೆ ಸರಿಪಡಿಸಲಾಗುತ್ತದೆ ಎಂದು ತಿಳಿಸಿದ್ದರು.
ಇದೀಗ ಮಂಗಳೂರು ನಗರ ಸಂಚಾರ ಪೊಲೀಸ್, ಖಾಸಗಿ ಬಸ್ ಅಸೋಸಿಯೇಶನ್, ಆರ್ಟಿಓ ಹಾಗೂ ಡಿಎಸ್ಎಸ್ ಸೇರಿದಂತೆ ಎಸ್ಸಿ. ಎಸ್ಟಿ ಸಂಘಟನೆಗಳ ಜಂಟಿ ಪ್ರಯತ್ನದಿಂದ ನಗರದ ಎಲ್ಲಾ ಬಸ್ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ಗಳನ್ನು ಅಳವಡಿಸಲಾಗಿದೆ.