ಮಂಗಳೂರು, ಮಾ 19 (DaijiworldNews/MS): ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ನಗರದ ಎ.ಜೆ ಆಸ್ಪತ್ರೆಯಲ್ಲಿ ಮಾ.19 ರ ಶುಕ್ರವಾರ ನಳಿನ್ ಅವರಿಗೆ ಕೊರೊನಾ ಲಸಿಕೆಯ ಚುಚ್ಚುಮದ್ದು ನೀಡಲಾಯಿತು.

ಕೊರೊನಾ ಲಸಿಕೆ ಪಡೆದು ಮಾತನಾಡಿದ ಸಂಸದರು, ಕೊರೊನಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಸ್ವೀಕರಿಸಬೇಕು, ಎಂದು ಮನವಿ ಮಾಡಿದರು. ರಾಜ್ಯದ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆದು, ದೇಶವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಲಸಿಕಾ ಅಭಿಯಾನ ವೇಗ ಪಡೆದುಕೊಂಡಿದ್ದು, ಈಗಾಗಲೇ ಹಲವು ಗಣ್ಯರು ಕೊರೊನಾ ಲಸಿಕೆ ಸ್ವೀಕರಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದ್ದಾರೆ.