ಪುತ್ತೂರು, ಮಾ 20(DaijiworldNews/MS): ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.20 ರ ಶನಿವಾರ ಬೆಳಗ್ಗೆ ನಡೆದಿದೆ.

ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ.ಈ ಮೂವರು ಬೈಕ್ ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದರು. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಕಾಂಚನ ಕ್ರಾಸ್ ಬಳಿ ಢಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಗಾಯಗೊಂಡ ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.