ಮಂಗಳೂರು/ಉಡುಪಿ, ಮಾ.20 (DaijiworldNews/MB) : ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 52 ಕೊರೊನಾ ವೈರಸ್ ಪ್ರಕರಣಗಳು ಹಾಗೂ ಉಡುಪಿಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 66 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವರದಿಯಾದ 52 ಕೊರೊನಾ ವೈರಸ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 35098 ಕ್ಕೆ ಏರಿವೆ. ಈ ಪೈಕಿ 492 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 606786ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 571688 ಮಾದರಿಗಳು ನೆಗೆಟಿವ್ ಆಗಿದೆ. ಶನಿವಾರ 24 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 33865ಕ್ಕೆ ಏರಿದೆ. ಈವರೆಗೆ ಒಟ್ಟು 741 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36835 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿ ಮಾಡಲಾಗಿದ್ದು 37,91,410 ರೂ.ಗಳ ದಂಡವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆ
ಶನಿವಾರ ದೃಢಪಟ್ಟ 66 ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 24,045ಕ್ಕೆ ಏರಿದೆ. ಈ ಪೈಕಿ 193 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಉಡುಪಿ ಜಿಲ್ಲೆಯಲ್ಲಿ 54, ಕುಂದಾಪುರದಲ್ಲಿ 10, ಕಾರ್ಕಳದಲ್ಲಿ 2 ಮಂದಿಗೆ ಕೊರೊನಾ ದೃಢಪಟ್ಟಿದೆ.
ಈವರೆಗೆ 3,93,069 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶನಿವಾರ 12 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,662 ಕ್ಕೆ ಏರಿದೆ. ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.
ಇನ್ನು ಈವರೆಗೆ 60042 ಮೊದಲ ಡೋಸ್ ಕೊರೊನಾ ಲಸಿಕೆ ಹಾಗೂ 16200 ಮಂದಿ ಎರಡನೇ ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.