ಮಂಗಳೂರು, ಆ 26(SM): ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಲಾಡ್ಜೊಂದರ ಮೇಲೆ ಪಾಂಡೇಶ್ವರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಈ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ, ದಾಳಿ ಸಂದರ್ಭ ಯಾವುದೇ ಅನೈತಿಕ ಚಟುವಟಿಗಳು, ಈ ಕುರಿತಾದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.
ಇನ್ನು ಲಾಡ್ಜ್ ಗೆ ಪೊಲೀಸ್ ದಾಳಿ ನಡೆದಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಗುಂಪು ಸೇರಿದ್ದಾರೆ. ಪರಿಣಾಮ ಸ್ಟೇಟ್ ಬ್ಯಾಂಕ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು ಇದನ್ನು ಅರಿತ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಬಳಿಕ ಸಂಚಾರ ಸುಗಮಗೊಳಿಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.