ಕಾರ್ಕಳ, ಆ 27(SM): ರಾಜ್ಯದಲ್ಲಿ ನಡೆಯಲಿರುವ ನಗರ ಸ್ಥಳೀಯಾಡಳಿತ ಚುನಾವಣೆಯಲ್ಲಿ ಶೇ. 75ಕ್ಕೂ ಮಿಕ್ಕಿ ಸ್ಥಳೀಯಾಡಳಿಗಳು ಬಿಜೆಪಿಯ ಪಾಲಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಪುರಸಭೆಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಅವರು ಮಾಧ್ಯಮದೊಂದಿಗೆ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಸಕರು ಬಿಜೆಪಿಯವರಾಗಿದ್ದು, ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯ ಸ್ಥಳೀಯಾಡಳಿತಗಳೆಲ್ಲವೂ ಬಿಜೆಪಿ ಪಾಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಉಡುಪಿ ನಗರಸಭೆ, ಕುಂದಾಪುರ ಪುರಸಭೆ, ಕಾರ್ಕಳ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗಳಲ್ಲಿ ಬಿಜೆಪಿ ಸ್ವಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುವ ಮೂಲಕ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರು ಸಕ್ರಿಯಾ ಪಕ್ಷದ ಹಾಗೂ ಅಭಿವೃದ್ಧಿ ಕಾರ್ಯದಲ್ಲಿ ನಿರತರಾಗಿರುವುದರಿಂದ ಬಿಜೆಪಿ ಗೆಲುವು ಖಚಿತ ಎಂದರು.
ಕಾರ್ಕಳ ಪುರಸಭೆಗೆ ಹೆಚ್ಚಿನ ಅನುದಾನ
ಸಂಸದೆಯಾದ ಬಳಿಕ ಕಾರ್ಕಳ ಪುರಸಭೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕೇಂದ್ರ ಅಭಿವೃದ್ಧಿ ನಿಧಿಯಡಿ ರಸ್ತೆ, ಸೇತುವೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಲ್ಲಿ ಅನುದಾನ ಬಿಡುಗಡೆಗೊಳಿಸಿದ್ದೇನೆ. ಭುವನೇಂದ್ರ ಕಾಲೇಜು ಪರಿಸರದಲ್ಲಿ ಎಂಆರ್ಪಿಎಲ್ ಸಂಸ್ಥೆಯಿಂದ ೫೦ ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ ಎಂದು ಹೇಳಿದರು.