ಮಂಗಳೂರು, ಆ 27(SM): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕೊಂಕಣಿ ಮಾನ್ಯತಾ ದಿವಸ್-2018’ ಮಂಗಳೂರಿನ ಟೌನ್ ಹಾಲ್ ನಲ್ಲಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕೊಂಕಣಿ ಭಾಷೆಯ ಪ್ರಗತಿಗೆ ಹೆಚ್ಚು ಹೆಚ್ಚು ಕೊಂಕಣಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ. ಇಂದು ಉತ್ತಮ ಪ್ರೋತ್ಸಾಹದಿಂದಾಗಿ ಕೊಂಕಣಿ ಮಾತನಾಡುತ್ತಿದ್ದಾರೆ. ಕೊಂಕಣಿ ಭಾಷೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡಿದ್ದು, ಪಾರ್ಲಿಮೆಂಟ್ ನಲ್ಲಿ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಅಧಿವೇಶನದ ಸಮಯದಲ್ಲಿ ನಾನು ಕೊಂಕಣಿಯಲ್ಲಿ ಮಾತನಾಡಿದ್ದು, ಕೊಂಕಣಿಯ ಮೇಲಾಗುತ್ತಿರುವ ಬೇಧಭಾವದ ಬಗ್ಗೆ ಧ್ವನಿ ಎತ್ತಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಆರ್.ಪಿ. ನಾಯಕ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಮಂಗಳೂರು ವಿವಿಯ ಇಂಚರ್ಜ್ ವೈಸ್ ಚಾನ್ಸಿಲರ್ ಡಾ. ಕಿಶೋರ್ ಕುಮಾರ್ ಸಿ.ಕೆ. ಮತ್ತಿತರರು ಉಪಸ್ಥಿತರಿದ್ದರು.