ಬೆಂಗಳೂರು, ಆ 29(SM): ಒಂದಲ್ಲ ಒಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂಥ ಭಾಷಣವನ್ನು ಪ್ರಕಾಶ್ ರೈ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಕಿರಣ್ ಎನ್ ಎಂಬ ವಕೀಲರು ಪ್ರಕಾಶ್ ರೈ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವುಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕಾಶ್ ರಾಜ್ ಅವರು ವಿಜಯಪುರದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.