ಮಂಗಳೂರು ಅ,4 : ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ನೂತನ ಉಪ ಆಯುಕ್ತ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮೂಲತಃ ಮೈಸೂರಿನವರಾದ ಉಮಾ ಪ್ರಶಾಂತ್ ಈ ಹಿಂದೆ ಕುಣಿಗಲ್, ಬೆಂಗಳೂರು, ಕಾರವಾರದಲ್ಲಿ ಡಿಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೊದಲ ಮಹಿಳಾ ಡಿಸಿಪಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.