ಉಡುಪಿ, ಆ31(SS): ಜಿಲ್ಲೆಯ 4 ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ.
ಈ ನಡುವೆ ಉಡುಪಿ ನಗರಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಮಲ್ಪೆ ಮಹಾತ್ಮ ಗಾಂಧೀ ಶತಾಬ್ದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತದಾನ ಕೇಂದ್ರಕ್ಕೆ ಮಾಜಿ ಸಚಿವೆ ಮನೋರಮಾ ಮಧ್ವರಾಜ್ ಅವರೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.
ಹಕ್ಕು ಚಲಾಯಿಸಿ ನಂತರ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮತ್ತು ನಾಯಕರ ಅಪಪ್ರಚಾರದಿಂದ ಜನ ಗೊಂದಲದಿಂದ ಮತದಾನ ಮಾಡಿದ್ದಾರೆ. ಆದರೆ, ಸದ್ಯ ಇರುವ ಜನಪ್ರತಿನಿಧಿಗಳ ಬಗ್ಗೆ ಜನ ಭ್ರಮ ನಿರಶನಗೊಂಡಿದ್ದಾರೆ. ಹಾಗಾಗಿ ಉಡುಪಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉತ್ತಮ ಫಲಿತಾಂಶ ಬರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದೆ. ಸುಗಮವಾಗಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ಪ್ರತಿ ಮತಗಟ್ಟೆಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.