ಮಂಗಳೂರು, ಸೆ01(SS): ಶತಮಾನದಲ್ಲೇ ಅತ್ಯಂತ ಭೀಕರ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಕೊಡಗು ನಲುಗಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ಎಂ.ಆರ್.ಪಿ.ಎಲ್. ಸಂಸ್ಥೆ ನೆರವಾಗಲು ಮುಂದಾಗಿದೆ.
ಈ ನಿಟ್ಟಿನಲ್ಲಿ, ಎಂ.ಆರ್.ಪಿ.ಎಲ್ ಸಂಸ್ಥೆ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರೂ. ನೆರವನ್ನು ನೀಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ್ ಅವರು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಒಂದು ಕೋಟಿ ರೂ. ಚೆಕ್ ಹಸ್ತಾಂತರಿಸಿದ್ದಾರೆ.
ಈ ವೇಳೆ ಎಂಆರ್ಪಿಎಲ್ ಹಣಕಾಸು ನಿರ್ದೇಶಕ ಎ.ಕೆ. ಸಾಹೂ, ಗ್ರೂಪ್ ಜನರಲ್ ಮೆನೇಜರ್ ಬಿ.ಎಚ್.ವಿ. ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.