ಮಂಗಳೂರು, ಅ 3: ರಾಜ್ಯ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ರ ದಿಢೀರ್ ವರ್ಗಾವಣೆ, ಹಾಗೂ ಖಾಲಿ ಇರುವ ನ್ಯಾಯಾಧೀಶರುಗಳ ನೇಮಕದ ಬೇಡಿಕೆ ಮುಂದಿರಿಸಿ , ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಬುಧವಾರ ಕೋರ್ಟ್ ಅವರಣದಲ್ಲಿ ಪ್ರತಿಭಟನೆ ನಡೆಯಿತು. ವಕೀಲರು ಇಂದು ಕೋರ್ಟ್ ಕಲಾಪವನ್ನು ಬಹಿಷ್ಕರಿಸಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಂ,ಆರ್ ಬಲ್ಲಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಹಿರಿಯ ನ್ಯಾಯಮೂರ್ತಿ ಪಾಟೀಲ್ ಮುಂಬಡ್ತಿ ಪಡೆಯುವ ಅವಕಾಶ ಇದ್ದರೂ , ಇದರಿಂದ ವಂಚಿತರಾಗಿ ಮನನೊಂದು ಅವರು ರಾಜೀನಾಮೆ ನೀಡಿದ್ದಾರೆ. ಈ ಘಟನೆಯನ್ನು ಮಂಗಳೂರು ವಕೀಲರ ಸಂಘ ತೀವ್ರ ಖಂಡಿಸುತ್ತದೆ ಅಲ್ಲದೆ ರಾಜ್ಯ ಹೈಕೋರ್ಟ್ ನಲ್ಲಿ 62 ಮಂದಿ ನ್ಯಾಯಮೂರ್ತಿಗಳ ನೇಮಕವಾಗಬೇಕಾಗಿದ್ದು ಈಗ ಕೇವಲ್ 27 ಮಂದಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ರಾಜ್ಯದ ಜನತೆಗೆ ನಾಯ್ಯ ಸಿಗಲು ವಿಳಂಬವಾಗುತ್ತಿದೆ. ಹೀಗಾಗಿ ತಕ್ಷಣ ನ್ಯಾಯಮೂರ್ತಿಗಳ ನೇಮಕಾತಿ ಮಾಡಬೇಕೆಂದು ಒಕ್ಕೊರಳಿನಿಂದ ಆಗ್ರಹಿಸಿದರು. ವಕೀಲರ ಸಂಘದ ಅಧ್ಯಕ್ಷ ಎಂ,ಆರ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ,ಪುಷ್ಪಲತಾ ಮುಂತಾದವರು ಭಾಗವಹಿಸಿದ್ದರು.