ಬೆಳ್ತಂಗಡಿ, ಸೆ 4(SM): ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕಳೆಂಜ ಗ್ರಾಮದ ಕಬ್ಲಾಜೆಯ ನೋಣಯ್ಯ ಗೌಡರ ಪುತ್ರಿ ಸುನೀತಾ(೧೬) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಸೀಮೆಎಣ್ಣೆ ಸುರಿದು, ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಯಾವುದೋ ವಿಚಾರಕ್ಕೆ ಸಂಬಂಧಿಸಿ ಮನನೊಂದು ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ. ವಿಪರೀತ ಸುಟ್ಟ ಗಾಯಗಳಾಗಿದ್ದ ಸುನೀತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಘಟನೆಯ ಕುರಿತಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.