ಮಂಗಳೂರು, ಸೆ 5(MSP): ರಾಜ್ಯ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಸೆ.4 ರ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಡಗಾಲಿನ ನೋವಿನಿಂದ ಬಳಲುತ್ತಿದ್ದ ಅವರು ಹೆಚ್ಚಿನ ಚಿಕಿತ್ಸೆ ಪಡೆಯಲು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವರಾದ ಬಳಿಕ ರಾಜ್ಯಾದ್ಯಂತ ಹಾಗೂ ಜಿಲ್ಲೆಯಾದ್ಯಾಂತ ಸತತ ಪ್ರಯಾಣ ಹಾಗೂ ಕೆಲಸದ ಒತ್ತಡದಿಂದ ಕಳೆದೊಂದು ವಾರದಿಂದ ಕಾಲು ಹಾಗೂ ಬೆನ್ನು ನೋವು ಕಾಡಲಾರಂಭಿಸಿತ್ತು. ಈ ಬಗ್ಗೆ ವೈದ್ಯರನ್ನು ಭೇಟಿ ಮಾಡಿದ್ದ ಅವರು ಚಿಕಿತ್ಸೆ ಪಡೆದಿದ್ದರು. ಆದರೆ ಮತ್ತೆ ನೋವು ಮರುಕಳಿಸಿದ ಕಾರಣ ವೈದ್ಯರ ಸಲಹೆ ಮೇರೆಗೆ ಬುಧವಾರದಿಂದ 5 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಈ ಬಗ್ಗೆ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ಈ ಸಂದರ್ಭದಲ್ಲಿ ಯಾವುದೇ ಕೆಲಸಕ್ಕಾಗಿ ಸಚಿವರ ಆಪ್ತ ಸಹಾಯಕರಾದ ಲಿಬ್ಜೆತ್ ಅಥವಾ ವಿಜಯ್ ಅವರನ್ನು ಸಂಪರ್ಕಿಸಬಹುದು ಎಂದು ಕಚೇರಿ
ಪ್ರಕಟಣೆಯಲ್ಲಿ ತಿಳಿಸಿದೆ.