ಅ 4: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರೂಪಾಯಿ ಕಡಿತಗೊಳಿಸಿದೆ. ಹೀಗಾಗಿ ಏರುತ್ತಲೇ ಹೋಗುತ್ತಿದ್ದ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿ ಸಾರ್ವಜನಿಕರು ನಿಟ್ಟಿಸಿರು ಬಿಟ್ಟಿದ್ದಾರೆ.ಪೆಟ್ರೋಲ್ ದರ ಬುಧವಾರದಿಂದ ಜಾರಿಯಾಗುವಂತೆ ಪ್ರತಿ ಲೀಟರ್ ಗೆ 2.50 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.25 ರೂಪಾಯಿ ಇಳಿಕೆ ಮಾಡಲಾಗಿದೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ಅಬಕಾರಿ ಸುಂಕವನ್ನು 2 ರೂ. ತಗ್ಗಿಸಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆಯಾಗಿದೆ. ಸುಂಕ ಕಡಿತದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 26 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ.