ಮಂಗಳೂರು, ಸೆ 6 (MSP): ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಯ ಅವಿಭಜಿತ ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸೆ. 7 ರ ಶುಕ್ರವಾರದಂದು ಭೇಟಿ ಮಾಡಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ಉಡುಪಿಗೆ ಆಗಮಿಸಲಿರುವ ಬೆಳಿಗ್ಗೆ 10 ಗಂಟೆಗೆ ಉಡುಪಿಯಲ್ಲಿ ಪ್ರಗತಿ ಪರಿಶೀಲನೆ ನಡೆಸದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿರುವರು. ಮುಖ್ಯಮಂತ್ರಿಗಳ ಜೊತೆಗೆ ಇತರ ಸಚಿವರು, ಶಾಸಕರು ಕೂಡಾ ಪಾಲ್ಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಿರುವರು. ಈ ಹಿಂದೆ ಧರ್ಮಸ್ಥಳ, ಸುಬ್ರಮಣ್ಯಕ್ಕೆ ಸಿಎಂ ಭೇಟಿ ಕೊಟ್ಟಿದ್ದರೂ ಅದು ಅವರ ವೈಯಕ್ತಿಕ ಭೇಟಿ ಆಗಿತ್ತು.
ಬೆಳಗ್ಗೆ 8.50 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಮ್ನ ತಲುಪುವ ಅವರು ರಸ್ತೆ ಮಾರ್ಗವಾಗಿ ಉಡುಪಿ ತಲುಪಿ ಅಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ ಬಳಿಕ ಅಲ್ಲಿಂದ 2 ಗಂಟೆ ಮಂಗಳೂರು ತಲುಪಿ ಸಭೆ ನಡೆಸಲಿದ್ದಾರೆ .