ಮಂಗಳೂರು, ಮಾ. 28 (DaijiworldNews/SM): ರವಿವಾರದಂದು ಉಡುಪಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 115 ಪ್ರಕರಣಗಳು ಪತ್ತೆಯಾಗಿದೆ ಮತ್ತು ಒಂದು ಸಾವು ಸಂಭವಿಸಿದೆ. ದಕ್ಷಿಣ ಕನ್ನಡ 68 ಹೊಸ ಸೋಂಕುಗಳನ್ನು ವರದಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 6,26,012 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 5,90,450 ಮಾದರಿಗಳು ನಕಾರಾತ್ಮಕವಾಗಿವೆ. ಜಿಲ್ಲೆಯಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 35,562 ಆಗಿದ್ದು, ಈ ಪೈಕಿ 572 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಆಸ್ಪತ್ರೆಗಳಿಂದ ಭಾನುವಾರ 52 ರೋಗಿಗಳು ಬಿಡುಗಡೆ ಮಾಡಲಾಗಿದೆ. ಒಟ್ಟು ಚೇತರಿಕೆಯ ಸಂಖ್ಯೆಯನ್ನು 34,248ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ನಿಂದ ಒಟ್ಟು ಮೃತಪಟ್ಟವರ ಸಂಖ್ಯೆ 742ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 4,14,182 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರವಿವಾರ 115 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆಯನ್ನು 25,061 ಕ್ಕೆ ಏರಿಕೆಯಾಗಿದೆ. ಈ ಪೈಕಿ 824 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಎಂಐಟಿ ಕ್ಯಾಂಪಸ್ನಿಂದ ಹೊಸ ಪ್ರಕರಣಗಳಲ್ಲಿ 70 ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಗಳಿಂದ ಭಾನುವಾರ ಒಟ್ಟು 27 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆಯನ್ನು 24,046 ಕ್ಕೆ ತಲುಪಿಸಲಾಗಿದೆ.
ಜಿಲ್ಲೆಯು ರವಿವಾರ ಒಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ ಇದುವರೆಗೆ 191ಕ್ಕೆ ತಲುಪಿದೆ. ಇಲ್ಲಿಯವರೆಗೆ, 80,012 ಜನರು ಮೊದಲ ವ್ಯಾಕ್ಸಿನೇಷನ್ ಪಡೆದರೆ, 17,779 ಜನರು ಎರಡನೇ ಡೋಸ್ ಪಡೆದಿದ್ದಾರೆ.