ಪುತ್ತೂರು, ಮಾ.29 (DaijiworldNews/PY): ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣಾಜೆಯಲ್ಲಿ ಮಾರ್ಚ್ 27ರಂದು ನಡೆದಿದೆ.

ಮೃತರನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ ಕಿರಣ್ (22) ಎಂದು ಗುರುತಿಸಲಾಗಿದೆ.
ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ಕೆಲವು ದಿನಗಳ ಹಿಂದೆ ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಚೇತರಿಸಿಕೊಂಡಿದ್ದರು.
ಮಾರ್ಚ್ 27ರ ಶನಿವಾರ ಸಂಜೆಯ ವೇಳೆ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಅವರು ಆದಾಗಲೇ ಸಾವನ್ನಪ್ಪಿದ್ದರು.
ಕಿರಣ್ ಕೆಲವು ಸಮಯದಿಂದ ಖಿನ್ನತೆಹೆ ಒಳಗಾಗಿದ್ದರು ಎನ್ನಲಾಗಿದೆ. ಕಿರಣ್ ತನ್ನ ಮನೆ ಸಮೀಪದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಆತನ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಾಯಿ ಮೀನಾಕ್ಷಿ, ತಂದೆ ಗಂಗಾಧರ ಗೌಡ ಹಾಗೂ ಸಹೋದರರನ್ನು ಅಗಲಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821