ಬಂಟ್ವಾಳ, ಮಾ.29 (DaijiworldNews/HR): ಪರವಾನಿಗೆ ಇಲ್ಲದೇ ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಸಹಿತ ಆರೋಪಿಯನ್ನು ಮಂಗಳೂರು ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಕೊಂಡು ಪ್ರಕರಣ ದಾಖಲಿಸಿದ ಘಟನೆ ಮಂಗಳೂರು ತಾಲೂಕಿನ ಸುರತ್ಕಲ್ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಚಾಲಕ ಸರ್ಫರಾಜ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿ ಅತನ ಮೇಲೆ ಪ್ರಕರಣ ದಾಖಲಿಸಿಕೊಂಡು ಸೊತ್ತು ಮತ್ತು ವಾಹನವನ್ನು ಸರ್ಕಾರದ ಪರವಾಗಿ ಅಮಾನತು ಮಾಡಿ ಕೊಳ್ಳಲಾಯಿತು.
ಇನ್ನು ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 2 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.