ಉಡುಪಿ, ಮಾ. 29 (DaijiworldNews/SM): ನಿಂತಿದ್ದ ಲಾರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತವೊಂದರಲ್ಲಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಸಿಮೆಂಟ್ ಲಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಉಡುಪಿಯ ಗುಂಡಿಬೈಲಿನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದೆ. ಅಲ್ಲದೆ, ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡಿರುವ ಆಟೋ ರಿಕ್ಷಾ ಚಾಲಕನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.