ಉಡುಪಿ,ಸೆ 10 (MSP): ಭಾರತ ಬಂದ್ ಸಂದರ್ಭ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಪರಿಣಾಮ ಬಿಜೆಪಿ ನಗರಾಧ್ಯಕ್ಷ ಪ್ರಭಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ
ಕಾಂಗ್ರೆಸ್ ಕಾರ್ಯಕರ್ತರು ಪ್ರಭಾಕರ ಪೂಜಾರಿ ಅವರ ಮೇಲೆ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಎಚ್ಚೆತ್ತ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಕೂಡಲೇ ಲಾಠಿ ಚಾರ್ಜ್ ಮಾಡಿ ಗುಂಪುಗಳನ್ನು ಚದುರಿಸಿದರು. ಇದೇ ವೇಳೆ ಕಾಂಗ್ರೆಸ್ ನಗರಸಭಾ ಸದಸ್ಯ ರಮೇಶ್ ಕಾಂಚನ್ ಮೇಲೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಗಳಿಂದ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಉಡುಪಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಕಾಂಚನ್ ಅವರನ್ನು ಕಾಂಗ್ರೆಸ್ ಮುಖಂಡ ವಿನಯ್ ಕುಮಾರ್ ಸೊರಕೆ ಭೇಟಿಯಾಗಿ ಮಾಹಿತಿ ಪಡೆದರು
ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳದಲ್ಲಿ ಬಿಗುವಿನ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಉಡುಪಿ ತಾಲೂಕಿನ ನಗರಸಭೆ ವ್ಯಾಪ್ತಿಯಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಸೆ. 10ರಿಂದ ಸೆ.11ರ ಮಂಗಳವಾರ ಬೆಳಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.