ಕಾಸರಗೋಡು, ಏ.01 (DaijiworldNews/HR): "ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಪ್ರತಿಪಕ್ಷಗಳ ಒಕ್ಕೂಟ ರಚಿಸಲಾಗುವುದು" ಎಂದು ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಸ್. ರಾಮಚಂದ್ರನ್ ಪಿಳ್ಳೆ ಹೇಳಿದ್ದಾರೆ.

ಈ ಕುರಿತು ಕಾಸರಗೋಡು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಒಂದೇ ಸ್ವರದಲ್ಲಿ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಪ್ರತಿಪಕ್ಷಗಳು ಮಾತನಾಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡಿದ್ದು, ಬಿಜೆಪಿ ವಿರುದ್ಧ ಧ್ವನಿ ಎತ್ತುವ ಶಕ್ತಿ ಇಲ್ಲ. ಇದರಿಂದ ಬಿಜೆಪಿಯೇತರ ಒಕ್ಕೂಟ ರಚನೆ ಅನಿವಾರ್ಯ" ಎಂದು ಹೇಳಿದರು.
ಇನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ವಿ ಬಾಲಕೃಷ್ಣನ್ ಮಾಸ್ಟರ್, ಉದುಮ ಶಾಸಕ ಕೆ. ಕುಂ ಞರಾಮನ್ ಮೊದಲಾದವರು ಉಪಸ್ಥಿತರಿದ್ದರು.