ಕಾಸರಗೋಡು, ಏ. 2 (DaijiworldNews/SM): ವಿಧಾನಸಭಾ ಚುನಾವಣೆಯ ಕೊನೆಯ ದಿನದ ಅಬ್ಬರದ ಪ್ರಚಾರಕ್ಕೆ ಚುನಾವಣಾ ಆಯೋಗ ನಿಷೇಧಿಸಿದೆ. ಕೋವಿಡ್ ಹಿನ್ನಲೆಯಲ್ಲಿ ಈ ನಿಯಂತ್ರಣ ಜಾರಿಗೆ ತರಲಾಗಿದೆ.

ಜನಗುಂಪು ಸೇರುವ ಯಾವುದೇ ಬಹಿರಂಗ ಪ್ರಚಾರ ನಡೆಸುವಂತಿಲ್ಲ. ಆದೇಶ ಉಲ್ಲಂಘಿಸಿದರೆ ಪೊಲೀಸರು ಪ್ರಕರಣ ದಾಖಲಿಸಲಿದ್ದು, ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿದೆ.
ಪ್ರಚಾರದ ಕೊನೆ ದಿನ ಅಬ್ಬರದ ಪ್ರಚಾರಕ್ಕೆ ಪಕ್ಷಗಳು ಮುಂದಾಗುತ್ತಿರುವ ಹಿನ್ನಲೆಯಲ್ಲಿ ಆಯೋಗ ಈ ಕ್ರಮ ತೆಗೆದು ಕೊಂಡಿದೆ.