ಉಡುಪಿ, ಎ.03 (DaijiworldNews/PY): ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಎಂದು ದೃಢಪಟ್ಟಿದೆ. ನಾನು ವೈಧ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ" ಎಂದು ಮನವಿ ಮಾಡಿದ್ದಾರೆ.