ಉಳ್ಳಾಲ, ಎ.04 (DaijiworldNews/PY): ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ರವಿವಾರ ಆಡಳಿತ ಸಮಿತಿ ಹುಂಡಿಯನ್ನು ತೆರೆಯುವ ಸಂದರ್ಭ ಪ್ರಕರಣ ತಿಳಿದುಬಂದಿದೆ.

ಕೆಲವು ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ಇದೀಗ ಕಾರಣಿಕ ಕ್ಷೇತ್ರವಾದ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ಈ ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಬಗ್ಗೆ ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.