ಕಾಸರಗೋಡು, ಏ.04 (DaijiworldNews/HR): ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಎಪ್ರಿಲ್ 6 ರಂದು ಚುನಾವಣೆ ನಡೆಯುತ್ತಿದ್ದು, ಇಂದು ಸಂಜೆ ಬಹಿರಂಗ ಪ್ರಚಾರದ ಕೊನೆ ದಿನವಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಜನ ಗುಂಪು ಸೇರುವ ಹಿನ್ನಲೆಯಲ್ಲಿ ಅಬ್ಬರದ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್ ನೀಡಿದೆ ಎನ್ನಲಾಗಿದೆ.
ಜಿಲ್ಲೆಯ ಐದು ಕ್ಷೇತ್ರಗಳಿಗೆ 38 ಅಭ್ಯರ್ಥಿಗಳು ಕಣದಲ್ಲಿದ್ದು, 1591 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ.
ಇನ್ನು ಜಿಲ್ಲೆಯಲ್ಲಿ ಇಂದು 190 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 63 ಮಂದಿಗೆ ಗುಣಮುಖರಾಗಿದ್ದಾರೆ.