ಉಡುಪಿ, ಏ.04 (DaijiworldNews/HR): ರಾಷ್ಟ್ರೀಯ ಹೆದ್ದಾರಿ -66 ಬೈಕಾಡಿ ರಸ್ತೆಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಕಾಂಕ್ರೀಟ್ ಕೆಲಸಗಾರು ಪ್ರಯಾಣಿಸುತ್ತಿದ್ದ ಟೆಂಪೊ ಪಲ್ಟಿಯಾಗಿ ಕಾರ್ಮಿಕರು ಸಣ್ಣಪುಟ್ಟ ಗಾಯದಿಂದ ಪಾರಾದ ಘಟನೆ ನಡೆದಿದೆ.










ಕಾನೂನುಬಾಹಿರವಾಗಿ ಕಾರ್ಮಿಕರನ್ನು ತುಂಬಿಸಿಕೊಂಡು ಹೋಗುತ್ತಿದ್ದ ಟೆಂಪೋದಲ್ಲಿ 25 ಕಾರ್ಮಿಕರು ಪ್ರಯಾಣಿಸುತ್ತಿದ್ದು, ಎಲ್ಲಾ ಕಾರ್ಮಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿದೆ.
ಗಾಯಾಳುಗಳನ್ನು ಉಡುಪಿಯ ಪರಿಸರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಯ ವೇಳೆ ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ತಿಳಿದು ಬಂದಿದೆ.