ಮಂಗಳೂರು, ಏ 5 (DaijiworldNews/MS): ನಗರದ ಪಚ್ಚನಡಿ ಡಂಪಿಂಗ್ ಯಾರ್ಡ್ ನಲ್ಲಿ ಭಾನುವಾರ ಕಾಣಿಸಿಕೊಂಡಿರುವ ಬೆಂಕಿ ಪರಿಸರವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಪಚ್ಚನಡಿ ಡಂಪಿಂಗ್ ಯಾರ್ಡ್ ಮಂಗಳೂರು ನಗರ ಪಾಲಿಕೆ ವ್ಯಾಫ್ತಿಯಲ್ಲಿ ಸಂಗ್ರಹಿಸಲಾದ ತ್ಯಾಜ್ಯವನ್ನು ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದರು. ಅಲ್ಲದೆ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.





















ಶಾರ್ಟ್ ಸರ್ಕ್ಯೂಟ್ ನಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ದಟ್ಟ ಹೊಗೆ ಉಂಟಾದ ಪರಿಣಾಮ ಮಂಗಳಾನಗರ ಸಹಿತ ಸುತ್ತಮುತ್ತ ಮನೆಯೊಳಗೆ ಹೊಗೆ ಅವರಿಸಿ ಜನ ಪರದಾಡಿದರು.
ಜಿಲ್ಲಾಧಿಕಾರಿ ಡಾ|ರಾಜೇಂದ್ರ , ಮೇಯರ್ ಪ್ರೇಮಾನಂದ ಶೆಟ್ಟಿ,ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸ್ಥಳೀಯ ಮನಪಾ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.