ಕಡಬ, ಎ.05 (DaijiworldNews/MB) : ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂದು ಗುರುತಿಸಲಾಗಿದೆ.
ಕಡಬದ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈಕೆಯು ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821