ಮಂಗಳೂರು, ಏ. 5 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 56 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳು 36,054 ಕ್ಕೆ ಏರಿವೆ. ಈ ಪೈಕಿ 626 ಪ್ರಕರಣಗಳು ಪ್ರಸ್ತುತ ಸಕ್ರೀಯವಾಗಿವೆ.

ಒಟ್ಟು 643,104 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 607,050 ಮಂದಿಯ ವರದಿ ನೆಗೆಟಿವ್ ಆಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 34686 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 72 ಜನರನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 742 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಸೋಮವಾರ 59 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 25,574ಕ್ಕೆ ಏರಿಕೆಯಾಗಿದೆ. ಈ ಪೈಕಿ 396 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 429,988 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ 53 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 24,986 ಕ್ಕೆ ಏರಿದೆ. ಈವರೆಗೆ ಒಟ್ಟು 192 ಸಾವುಗಳು ಸಂಭವಿಸಿವೆ.