ಉಡುಪಿ, ಏ.06 (DaijiworldNews/SM): ಬುಧವಾರದಂದು ರಾಜ್ಯದಲ್ಲಿ ಕೆಎಸ್ ಆರ್ ಟಿಸಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಖಾಸಗಿ ಬಸ್ ಮಾಲಿಕರ ಒಕ್ಕೂಟದ ಕುಯಿಲಾಡಿ ಸುರೇಶ್ ನಾಯಕ್ ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಖಾಸಗಿ ಸಾರಿಗೆ ವ್ಯವಸ್ಥೆ ಸರಕಾರದ ಜೊತೆ ಇದೆ. ರಾಜ್ಯದಲ್ಲಿ ಜನರಿಗೆ ತೊಂದರೆ ಆಗಬಾರದು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಖಾಸಗಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
ಕೆಎಸ್ ಆರ್ ಟಿಸಿ ನೌಕರರು ಮುಷ್ಕರ ಹಿಂತೆಗೆಯಬೇಕು. ಸರಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಜನರು ಬುಧವಾರ ಕೂಡಾ ಸಾರಿಗೆ ಇಲ್ಲ ಎಂದು ಹೆದರುವುದು ಬೇಡ. ಸರೆಂಡರ್ ಆಗಿರುವ ಬಸ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ, ನಾಳೆಯಿಂದ ರಸ್ತೆಗಿಳಿಸಲು ಸರಕಾರ ಅನುಮತಿ ನೀಡಿದೆ ಎಂದರು.