ಮಂಗಳೂರು, ಏ 7 (DaijiworldNews/MS): ನಗರದ ಪಂಜಿಮೊಗರು ರಾಯಿಕಟ್ಟೆಯಲ್ಲಿ , ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ

ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದಾರೆ. ಸೋಮವಾರ ರಾತ್ರಿ ತಾನು ಅಡುಗೆ ಮಾಡುವಾಗ ಮಗಳು ನನ್ನ ಬಳಿಗೆ ಓಡಿ ಬಂದಿದ್ದು, ಗಣೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿದ್ದಾಳೆ ಎಂದು ತಾಯಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.