ಮಂಗಳೂರು, ಏ. 07 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 145 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 36,400ಕ್ಕೆ ಏರಿಕೆಯಾಗಿದೆ. ಈ ಪೈಕಿ 808 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 6,52,711 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 6,16,311 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 55 ಜನರನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 743 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಗುರುವಾರ ಹೊಸದಾಗಿ 63 ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 25,783ಕ್ಕೆ ಏರಿಕೆಯಾಗಿದೆ. ಈ ಪೈಕಿ 401 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 4,36,889ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಗುರುವಾರ 63 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 192 ಸಾವುಗಳು ಸಂಭವಿಸಿವೆ.