ಮಂಗಳೂರು, , ಏ 9(DaijiworldNews/MS): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಹಿರಿಯ ನಾಯಕ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಡುವೆ ಇದ್ದ ಭಿನ್ನಾಭಿಪ್ರಾಯಗಳು ಬಗೆಹರಿದಿದೆ. ಪಕ್ಷದ ಹಿರಿಯರು ಗೊಂದಲವನ್ನು ಈಗಾಗಲೇ ನಿವಾರಿಸಿದ್ದಾರೆ. ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದ ಆಡಳಿತ ಸುಭದ್ರವಾಗಿ ಮುನ್ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಎ.8ರ ಗುರುವಾರ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, "ಈಶ್ವರಪ್ಪನವರು ಪಕ್ಷದ ಹಿರಿಯ ನಾಯಕರು ಅವರು ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸಿದ್ದಾರೆ, ಅಲ್ಲದೆ ನಾನು ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಇಬ್ಬರೂ ನಾಯಕರು ಒಂದಾಗಿದ್ದಾರೆ, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ನಾನು ತೊಡಗಿಸಿಕೊಳ್ಳಲಿದ್ದು, ಪಕ್ಷದ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಯಾವುದೇ ಕಸರತ್ತು ನಡೆಸಿದರು ಕಾಂಗ್ರೆಸ್ ಉಪಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಭವಿಷ್ಯ ನುಡಿದರು.