ಮಂಗಳೂರು, ಸೆ 18(SM): ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿಯವರ ಮುಂದೆಯೇ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯತ್ ಪ್ರಭರ ಕಾರ್ಯನಿರ್ವಹಕಾಧಿಕಾರಿ ಸದಾನಂದ ಅವರನ್ನು ಇಒ ಹುದ್ದೆಯಿಂದ ಬಿಡುಗಡೆ ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ ೧೫ರಂದು ಪಿಡಿಒಗಳು ಇಒ ಕಚೇರಿಗೆ ತೆರಳಿದ್ದ ಸಂದರ್ಭ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿಯವರಿಗೆ ಮಾಹಿತಿ ರವಾನಿಸಲಾಗಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಶಾಸಕರ ಮುಂದೆಯೇ ಇಒ ಸದಾನಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇಲಾಖೆಗೆ ಲಂಚ ಪಾವತಿಸಬೇಕೆನ್ನುವ ವೀಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ೨೪ ಗಂಟೆಯೊಳಗೆ ಲಿಖಿತ ಸ್ಪಷ್ಟನೆ ನೀಡುವಂತೆ ಜಿಲ್ಲಾ ಸಿಇಒ ಎಂ.ಆರ್. ರವಿ ಸೂಚಿಸಿದ್ದರು. ಆದರೆ, ಸಿಇಒ ಆದೇಶಕ್ಕೆ ಸೊಪ್ಪು ಹಾಕದ ಅಧಿಕಾರಿಯನ್ನು ಇಒ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.
ಇಒ ಅವರ ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಅವರನ್ನು ಇಒ ಹುದ್ದೆಯಿಂದ ಬಿಡುಗಡೆ ಮಾಡಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಕಾಧಿಕಾರಿ ಎಂ. ಆರ್. ರವಿ ಅವರು ಆದೇಶ ಹೊರಡಿಸಿದ್ದಾರೆ.