ಕೋಟ,ಸೆ 19 (MSP): ಕಳೆದ ಎರಡೂವರೆ ವರ್ಷಗಳಿಂದ ಅಪೂರ್ಣ, ಅಸಮರ್ಪಕ, ಅವೈಜ್ಞಾನಿಕ ಕಾಮಗಾರಿ, ಸರ್ವೀಸ್ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಬೀದಿದೀಪ, ಅಪಘಾತ ವಲಯದಲ್ಲಿ ಸುರಕ್ಷತೆ ಹಾಗೂ ಕೆಎ-20 ವಾಹನಗಳಿಗೆ ಸಂಪೂರ್ಣ ಸುಂಕ ವಿನಾಯತಿಯನ್ನು ಕೋರಿ ಹಲವಾರು ಪ್ರತಿಭಟನೆಗಳನ್ನು ನಡೆಸಿಯೂ ಯಾವುದೇ ರೀತಿಯ ಸ್ಪಂದನೆಯ ದೊರಕದೇ ಇರುವುದರಿಂದ ಎಲ್ಲಾ ಜನಪ್ರತಿನಿಧಿಗಳೊಡನೆಗೂಡಿ ಸ್ಥಳೀಯ ಸಂಘ ಸಂಸ್ಥೆಗಳು, ಸಾರ್ವಜನಿಕರ ಬೃಹತ್ ಪ್ರತಿಭಟನೆ ಸೆ.20 ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯ ತನಕ ಸಾಸ್ತಾನ ಟೋಲ್ ಗೇಟ್ ಬಳಿ ನಡೆಯಲಿದೆ.
ಈ ಪ್ರತಿಭಟನೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕ ರಘುಪತಿ ಭಟ್, ರಾಜ್ಯ ಇಂಟೆಕ್ ಅಧ್ಯಕ್ಷ ರಾಕೇಶ ಮಲ್ಲಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಜೆಡಿಎಸ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಜಿ.ಪಂ., ತಾ.ಪಂ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ