ಮಂಗಳೂರು,ಸೆ 23 (MSP): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಕುದ್ರೋಳಿ ಕ್ಷೇತ್ರದ ಅಭಿವೃದ್ದಿ ರೂವಾರಿ, ಮಾಜಿ ಕೇಂದ್ರ ಸಚಿವ .ಬಿ ಜನಾರ್ಧನ ಪೂಜಾರಿ ತಿಳಿಸಿದ್ದಾರೆ.
ಈ ಬಾರಿ ಮಂಗಳೂರು ದಸರಾ ಮಹೋತ್ಸವ ಅ. 10 ರಿಂದು 19 ನಡೆಯಲಿದ್ದು ದಸರಾಮಹೋತ್ಸವದ ಉದ್ಘಾಟನೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅ.10 ರಂದು ದೇವಾಲಯದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆ ಪ್ರತಿಷ್ಟಾಪನೆಯ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಅ. 19 ರಂದು ವೈಭವದ ಶೋಭಾ ಯಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇನ್ನು ದಸರಾ ಮಹೋತ್ಸವದ ನವರಾತ್ರಿಯಂದು ನಾನಾ ಕ್ಷೇತ್ರದ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಪ್ರತಿದಿನವೂ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇಶದ ಪ್ರಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಮದ್ಯಾಹ್ನ ಅನ್ನದಾನ ನಡೆಯಲಿದೆ ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ತಿಳಿಸಿದ್ದಾರೆ.