ಮಂಗಳೂರು, ಸೆ 23(SM): ರಾಜ್ಯದಲ್ಲಿ ಆಡಳಿತದಲ್ಲಿರುವ ಸಮ್ಮಿಶ್ರ ಸರಕಾರವನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಸ್ಥಿರವಾಗಿದ್ದು, ಅಲ್ಪಾವಧಿಯಲ್ಲೇ ಜನರ ಮನ ಗೆದ್ದಿದೆ ಎಂದರು.
ಸರಕಾರದ ಕೆಲವೊಂದು ನೀತಿಗಳಿಂದಾಗಿ ರಾಜ್ಯದ ಜನತೆ ಸರಕಾರದ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಇದು ಪ್ರತಿ ಪಕ್ಷ ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ ಎಂದರು.
ಆಡಳಿತರೂಢ ಸರಕಾರ ಸುಸೂತ್ರವಾಗಿ ನಡೆಯಲು ಪ್ರತಿಪಕ್ಷಗಳು ಸಲಹೆ ಸೂಚನೆಗಳನ್ನು ನೀಡಬೇಕು. ಆದರೆ, ವಿರೋಧ ಪಕ್ಷ ತನ್ನ ಜವಾಬ್ದಾರಿಯನ್ನು ಮರೆತಿದ್ದು, ಸರಕಾರಕ್ಕೆ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದರು.