ಮಂಗಳೂರು, ಮೇ.03 (DaijiworldNews/PY): 30 ವರ್ಷದ ಕೊರೊನಾ ಸೋಂಕಿತರೋರ್ವರು ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದ ಘಟನೆ ಸೋಮವಾರ ಮಂಗಳೂರಿನಲ್ಲಿ ನಡೆದಿದೆ.
ರೋಗಿಯನ್ನು ಮುಂಡ್ಕೂರ್ ಗ್ರಾಮದ ನಿವಾಸಿ ಎನ್ನಲಾಗಿದೆ.
ಇವರು ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಕೊರೊನಾ ವಾರ್ಡ್ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ. ಸೋಂಕಿತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ.
ಸೋಂಕಿತ ವ್ಯಕ್ತಿಯು ಮಾನಸಿಕ ಸಮಸ್ಯೆಯಿಂದ ಬಳಲುತ್ತಿ ದ್ದ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.