ನವದೆಹಲಿ, ಸೆ 25(SM): ಪ್ರತಿಷ್ಠಿತ ರಾಷ್ಟ್ರೀಯ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರಕಟಗೊಂಡಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಈ ಪ್ರಶಸ್ತಿಗೆ ಪಾತ್ರರಾಗಿದ್ದು, ಇಂದು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಈವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಭಾರತದ ಸ್ಟಾರ್ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು ಅಥ್ಲೀಟ್ ಹಿಮಾದಾಸ್ ಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನೀರಜ್ ಚೋಪ್ರಾ ಅವರು ಈ ಬಾರಿಯ ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ನಲ್ಲಿ ಬಂಗಾರ ಗೆದ್ದಿದ್ದಕ್ಕಾಗಿ ಮತ್ತು ಜೂನಿಯರ್ ವರ್ಲ್ಡ್ ಚಾಂಪಿಯನ್ ಸ್ಪ್ರಿಂಟರ್ ಸೇರಿದಂತೆ ಹಿಮಾದಾಸ್ ಸೇರಿ ಸುಮಾರು 20 ಮಂದಿ ಕ್ರೀಡಾ ಸಾಧಕರಿಗೆ ಅರ್ಜುನ ಪ್ರಶಸ್ತಿ ನೀಡಲಾಯಿತು.